ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಂ ಮೀಸಲು ಕುರಿತ ನಿರ್ಧಾರ ಮೇ‌ 9ರ ವರೆಗೆ ಜಾರಿ ಬೇಡ: ಸುಪ್ರೀಂ ನಿರ್ದೇಶನ

2ಬಿ ಅಡಿ ಮುಸ್ಲಿಮರಿಗಿದ್ದ ಶೇ 4ರ ಮೀಸಲಾತಿಯನ್ನು ಇಡಬ್ಲ್ಯುಎಸ್‌ಗೆ ವರ್ಗಾಯಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.
Published 25 ಏಪ್ರಿಲ್ 2023, 6:15 IST
Last Updated 25 ಏಪ್ರಿಲ್ 2023, 6:15 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗಿದ್ದ ಶೇಕಡ 4ರ ಮೀಸಲಾತಿಯನ್ನು ತೆಗೆದು, ಆರ್ಥಿಕ ದುರ್ಬಲ ವರ್ಗಗಳಿಗೆ (ಇಬ್ಲ್ಯುಎಸ್‌) ವರ್ಗಾಯಿಸಿರುವ ಆದೇಶವನ್ನು ಮೇ 9ರ ವರೆಗೆ ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.

ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಏಪ್ರಿಲ್‌ 13ರಂದು ನಡೆಸಿದ್ದ ಸುಪ್ರೀಂ ಕೋರ್ಟ್, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ, ಅಸ್ಥಿರ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿತ್ತು.‌

ಮಂಗಳವಾರ ವಿಚಾರಣೆ ಮುಂದುವರಿಸಿದ ಸುಪ್ರೀಂ ಕೋರ್ಟ್‌, ಮೇ 9ರಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೆ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT