ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯ ಹೋಗಲಾಡಿಸಲು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಜಾರಿಗೆ ತಂದಿರುವ ಹೊಸ ನಿಯಮಗಳನ್ನು(ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಉತ್ತೇಜಿಸುವ ನಿಯಮ –2026) ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.

ಯುಜಿಸಿ ಹೊಸ ನಿಯಮ 3 (ಸಿ) ಅನ್ವಯ, ಜಾತಿ ಆಧಾರಿತ ತಾರತಮ್ಯ ತಡೆಯಲು ಕಾಲೇಜು ಕ್ಯಾಂಪಸ್ಗಳಲ್ಲಿ, ವಿಶ್ವವಿದ್ಯಾಲಯದಲ್ಲಿ ಸಮಾನ ಅವಕಾಶ ಕೇಂದ್ರಗಳು (ಇಒಸಿ), ಸಮಾನತೆ ಸಮಿತಿ, ಓಂಬುಡ್ಸ್ಮನ್, ಸಹಾಯವಾಣಿ ಸ್ಥಾಪಿಸುವುದರ ಬಗ್ಗೆ ಪ್ರಸ್ತಾಪಿಸಲಾಗಿದೆ.

ಆದರೆ, ಈ ಸೌಲಭ್ಯದ ವ್ಯಾಪ್ತಿಯನ್ನು ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ), ಅಂಗವಿಕಲರು ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮಾತ್ರ ಸೀಮಿತಗೊಳಿಸಲಾಗಿದೆ. ಈ ನಿಯಮವು ಮೀಸಲಾತಿ ವರ್ಗದಡಿ ಸೇರದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿದಾರರು ದೂರಿದ್ದರು.

‘ಮೀಸಲಾತಿ ವರ್ಗದಡಿ ಸೇರದವರು ತಮ್ಮ ಜಾತಿ ಹೆಸರಿನಲ್ಲಿ ಕಿರುಕುಳ ಅಥವಾ ತಾರತಮ್ಯ ಎದುರಿಸುವ ಸಾಧ್ಯತೆ ಇರುತ್ತದೆ. ಈ ನಿಯಮ ಅಸಾಂವಿಧಾನಿಕ ಮತ್ತು ಸಂವಿಧಾನದ 14ನೇ ವಿಧಿ (ಸಮಾನತೆಯ ಹಕ್ಕು), 15 (1) ವಿಧಿ (ಜಾತಿ ಆಧಾರಿತ ತಾರತಮ್ಯ ನಿಷೇಧ) ಮತ್ತು 21ನೇ ವಿಧಿಯನ್ನು (ಜೀವಿಸುವ ಹಕ್ಕು) ಉಲ್ಲಂಘಿಸುತ್ತದೆ ಎಂದೂ ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ನ್ಯಾಯಾಲಯ ಹಸ್ತಕ್ಷೇಪ ಮಾಡದಿದ್ದರೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆಯಿದ್ದು, ಸಮಾಜದಲ್ಲಿ ವಿಭಜನೆಗೆ ಕಾರಣವಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೊಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

ಮೇಲ್ನೋಟಕ್ಕೆ ಈ ನಿಯಮಗಳಲ್ಲಿರುವ ಭಾಷೆ ಮತ್ತು ವಿವರಗಳು ಅಸ್ಪಷ್ಟವಾಗಿವೆ. ಅದನ್ನು ದುರುಪಯೋಗಪಡಿಸಿಕೊಳ್ಳದಂತೆ ತಿದ್ದುಪಡಿ ಮಾಡಲು ತಜ್ಞರು ಪರಿಶೀಲಿಸಬೇಕಾಗಿದೆ ಎಂದು ನ್ಯಾಯಾಲಯ ಹೇಳಿತು.

ಯುಜಿಸಿ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ನ್ಯಾಯಾಲಯ ಮಾರ್ಚ್ 19ರ ಒಳಗೆ ನೋಟಿಸ್ಗೆ ಉತ್ತರ ಸಲ್ಲಿಸಬೇಕು ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.