ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಡಬ್ಲ್ಯೂಎಸ್‌ಗೆ ಮೀಸಲಾತಿ ಅನುಷ್ಠಾನಕ್ಕೆ ‘ಸುಪ್ರೀಂ’ ಅನುಮತಿ

ಆದಾಯ ಮಿತಿ ಪ್ರಶ್ನಿಸಿದ ಅರ್ಜಿಯ ಅಂತಿಮ ವಿಚಾರಣೆ ಮಾರ್ಚ್‌ 3ನೇ ವಾರಕ್ಕೆ ನಿಗದಿ
Last Updated 20 ಜನವರಿ 2022, 16:29 IST
ಅಕ್ಷರ ಗಾತ್ರ

ನವದೆಹಲಿ: 2021–22ನೇ ಶೈಕ್ಷಣಿಕ ವರ್ಷದ ನೀಟ್ (ಪದವಿ ಮತ್ತು ಪಿಜಿ) ಪ್ರವೇಶಕ್ಕೆ ಸಂಬಂಧಿಸಿ ಅಖಿಲ ಭಾರತ ಕೋಟಾದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ (ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ ಶೇ 10ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಗುರುವಾರ ಅನುಮತಿ ನೀಡಿತು.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಎ.ಎಸ್‌.ಬೋಪಣ್ಣ ಅವರಿದ್ದ ನ್ಯಾಯಪೀಠಈ ಕುರಿತ ಅರ್ಜಿಯ ವಿಚಾರಣೆ ನಡೆಸಿತು.

ಇಡಬ್ಲ್ಯೂಎಸ್ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲು ನಿಗದಿಪಡಿಸಿರುವ ವಾರ್ಷಿಕ ₹ 8 ಲಕ್ಷ ಆದಾಯ ಮಿತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು ಮಾರ್ಚ್‌ ಮೂರನೇ ವಾರ ನಿಗದಿಪಡಿಸುವುದಾಗಿಯೂ ನ್ಯಾಯಪೀಠ ಹೇಳಿತು.

‘ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಿಗದಿ ಮಾಡಿರುವ ಅರ್ಹತೆಯಲ್ಲಿ ಮಾಡುವ ಯಾವುದೇ ಬದಲಾವಣೆ ಗೊಂದಲ ಸೃಷ್ಟಿಸುತ್ತದೆ. ಅಲ್ಲದೇ, ಕೋವಿಡ್‌–19 ಪಿಡುಗಿನ ಈ ಸಂದರ್ಭದಲ್ಲಿ ಪ್ರವೇಶ ಪ್ರಕ್ರಿಯೆ ಮತ್ತಷ್ಟೂ ವಿಳಂಬವಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

‘ಈ ವರ್ಗದ ಅಭ್ಯರ್ಥಿಗಳ ಪ್ರವೇಶಕ್ಕೆ ಮಾನದಂಡ ನಿಗದಿ ಮಾಡುವಾಗ ಸರಿಯಾದ ಕ್ರಮಗಳನ್ನು ಅನುಸರಿಸಿಲ್ಲ ಎಂಬ ಆರೋಪಗಳಿವೆ. ಹೀಗಾಗಿ, ಸಂಬಂಧಪಟ್ಟ ಎಲ್ಲ ಕಕ್ಷಿದಾರರ ವಾದಗಳನ್ನು ಆಲಿಸದೇ ಈ ಆರೋಪಗಳ ಕುರಿತು ಮೇಲ್ನೋಟಕ್ಕೆ ಅಭಿಪ್ರಾಯ ತಳೆಯಲಾಗದು’ ಎಂದೂ ನ್ಯಾಯಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT