ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಇಂದು

Published : 20 ಆಗಸ್ಟ್ 2024, 0:08 IST
Last Updated : 20 ಆಗಸ್ಟ್ 2024, 0:08 IST
ಫಾಲೋ ಮಾಡಿ
Comments

ನವದೆಹಲಿ: ಕೋಲ್ಕತ್ತದ ಆರ್‌.ಜಿ.ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ದೂರಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ನಡೆಸಲಿದೆ.

ಆಗಸ್ಟ್‌ 20ರಂದು ಕೈಗೆತ್ತಿಕೊಳ್ಳಲು ಪಟ್ಟಿಮಾಡಿರುವ ಕಲಾಪಗಳ ಪಟ್ಟಿಯಲ್ಲಿ ಈ ಪ್ರಕರಣ ಎಲ್ಲಕ್ಕಿಂತ ಮೊದಲು ಬರಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಬೆಳಿಗ್ಗೆ 10.30ಕ್ಕೆ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರೂ ಪೀಠದಲ್ಲಿದ್ದಾರೆ.

ಆರ್‌.ಜಿ.ಕರ್ ಆಸ್ಪತ್ರೆಯಲ್ಲಿ ಆಗಸ್ಟ್‌ 9ರಂದು ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈಯಲಾಗಿತ್ತು. ಈ ಘಟನೆಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT