‘ಶಿಕ್ಷೆ ವಿಧಿಸಿರುವ ಪ್ರಮಾಣ ತೀರಾ ಕಡಿಮೆ’
ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಶಿಕ್ಷೆ ವಿಧಿಸಿರುವ ಪ್ರಮಾಣ ತುಂಬಾ ಕಡಿಮೆಯಿದೆ. ಶೇ 90ಕ್ಕೂ ಹೆಚ್ಚು ಪ್ರಕರಣಗಳು ಆರೋಪಿಗಳ ಖುಲಾಸೆಯಲ್ಲಿ ಕೊನೆಗೊಳ್ಳುತ್ತಿವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಸೈಯದ್ ಇಫ್ತಿಕರ್ ಅಂದ್ರಾಬಿ ಜಾಮೀನು ಅರ್ಜಿ ವಿಚಾರಣೆ ವೇಳೆ ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ನೀಡಿರುವ ದತ್ತಾಂಶಗಳನ್ನು ಪರಿಶೀಲಿಸಿದ ನ್ಯಾಯಪೀಠ ‘2019ರಿಂದ 2023ರವರೆಗಿನ ಅವಧಿಯಲ್ಲಿ ಯುಎಪಿಎ ಅಡಿ ಶಿಕ್ಷೆ ಘೋಷಣೆಯಾದ ಪ್ರಕರಣಗಳ ಪ್ರಮಾಣ ಶೇ 2ರಿಂದ 6ರಷ್ಟಿದೆ’ ಎಂದು ಹೇಳಿತು.