ನವದೆಹಲಿ: ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದತಿಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಗೆ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವನ್ನು ಸೋಮವಾರ ಸುಪ್ರೀಂ ಕೋರ್ಟ್ ರಚಿಸಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನು ಒಳಗೊಂಡಿದೆ. ಇದು ಜುಲೈ 11ರಿಂದ ಅರ್ಜಿಗಳ ವಿಚಾರಣೆ ನಡೆಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕೇಂದ್ರ ಸರ್ಕಾರ 2019ರ ಆಗಸ್ಟ್ 5ರಂದು ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.