ನವದೆಹಲಿ: ಸುಪ್ರೀಂಕೋರ್ಟ್‌ನಿಂದ ಇದೇ ಮೊದಲ ಬಾರಿಗೆ ಕಲಾಪದ ನೇರ ಪ್ರಸಾರ ಶುಕ್ರವಾರ ಚಾಲನೆ ಸಿಕ್ಕಿತು.
ವಿಧ್ಯುಕ್ತ ಪೀಠದ ನೇತೃತ್ವ ವಹಿಸಿದ್ದ ಸಿಜೆಐ ಎನ್.ವಿ. ರಮಣ ಅವರು, ಎನ್‌ಐಸಿಯ ವೆಬ್ ಕಾಸ್ಟ್ ಪೋರ್ಟಲ್ ಮೂಲಕ ನಿವೃತ್ತಿ ದಿನದ ಕಲಾಪ ನೇರ ಪ್ರಸಾರಕ್ಕೆ ಚಾಲನೆ ನೀಡಿದರು.
ನ್ಯಾಯಾಲಯದಲ್ಲಿ ಸಾಂವಿಧಾನಿಕ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಕರಣಗಳ ವಿಚಾರಣೆಗಳ ಕಲಾಪದ ನೇರ ಪ್ರಸಾರಕ್ಕೆ 2018ರಲ್ಲಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಸಿಜಿಐ ಅವರು ನಡೆಸುವ ಪ್ರಮುಖ ಪ್ರಕರಣಗಳ ವಿಚಾರಣೆಯ ಕಲಾಪದ ನೇರ ಪ್ರಸಾರವನ್ನು ಪೈಲಟ್ ಯೋಜನೆ ಆಧಾರದ ಮೇಲೆ ಪ್ರಾರಂಭಿಸಬಹುದು. ಇದರ ಯಶಸ್ಸು ನೋಡಿಕೊಂಡು ಈ ಪ್ರಕ್ರಿಯೆಯನ್ನು ಇತರ ನ್ಯಾಯಾಲಯ ಕೊಠಡಿಗಳಲ್ಲೂ ಅಳವಡಿಸಬಹುದು ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಈ ಹಿಂದೆ ಹೇಳಿದ್ದರು.