ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರಿಯಾ, ಸುನೇತ್ರಾ ನಾಮಪತ್ರ ಸಲ್ಲಿಕೆ

Published 18 ಏಪ್ರಿಲ್ 2024, 15:47 IST
Last Updated 18 ಏಪ್ರಿಲ್ 2024, 15:47 IST
ಅಕ್ಷರ ಗಾತ್ರ

ಪುಣೆ: ಮೂರು ಬಾರಿಯ ಸಂಸದೆ ಸುಪ್ರಿಯಾ ಸುಳೆ ಮತ್ತು ಅವರ ಸಂಬಂಧಿ ಸುನೇತ್ರಾ ಪವಾರ್‌ ಅವರು ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದರು.

ಸುಪ್ರಿಯಾ ಅವರು ಎನ್‌ಸಿಪಿ ಶರದ್‌ ಪವಾರ್‌ ಬಣದಿಂದ ಹಾಗೂ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್ ಅವರ ಪತ್ನಿ ಸುನೇತ್ರಾ ಅವರು ಎನ್‌ಸಿಪಿ ಅಜಿತ್‌ ಪವಾರ್‌ ಬಣದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಕಾಂಗ್ರೆಸ್‌ ಮುಖಂಡರಾದ ಬಾಳಾಸಾಹೇಬ್‌ ಥೋರಟ್‌ ಮತ್ತು ವಿಶ್ವಜಿತ್‌ ಕದಂ ಅವರು ಸುಪ್ರಿಯಾ ಅವರ ಜೊತೆಗಿದ್ದರು.

ಮುಖ್ಯಮಂತ್ರಿ ಏಕನಾಥ ಶಿಂದೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಮತ್ತು ಎನ್‌ಸಿಪಿ ಅಜಿತ್‌ ಪವಾರ್‌ ಬಣದ ಮುಖಂಡ ಪ್ರಫುಲ್‌ ಪಟೇಲ್‌ ಅವರು ಸುನೇತ್ರಾ ಅವರ ಜೊತೆಗಿದ್ದರು. ಈ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ.

ಮೆಹಬೂಬಾ ನಾಮಪತ್ರ:

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌–ರಜೌರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಗುರುವಾರ ಉಮೇದುವಾರಿಕೆ ಸಲ್ಲಿಸಿದರು. 

ಬಳಿಕ ಮಾತನಾಡಿದ ಅವರು, ಚುನಾವಣೆ ಬಹಿಷ್ಕರಿಸದಂತೆ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT