ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೂರತ್: ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ ಅನೂರ್ಜಿತಗೊಳಿಸಲು ಹೈಕೋರ್ಟ್‌ಗೆ ಅರ್ಜಿ

Published 3 ಜೂನ್ 2024, 23:46 IST
Last Updated 3 ಜೂನ್ 2024, 23:46 IST
ಅಕ್ಷರ ಗಾತ್ರ

ಅಹಮದಾಬಾದ್: ಸೂರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಯನ್ನು ಅನೂರ್ಜಿತಗೊಳಿಸುವಂತೆ ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿಯೊಂದು ಸೋಮವಾರ ಸಲ್ಲಿಕೆಯಾಗಿದೆ.

ಸೂರತ್‌ನ ಮತದಾರರು ಎಂದು ಹೇಳಿಕೊಂಡಿರುವ ಅರ್ಜಿದಾರರು, ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದ ಚುನಾವಣಾಧಿಕಾರಿಯ ನಿರ್ಧಾರವು ಪ್ರಜಾಪ್ರತಿನಿಧಿ ಕಾಯ್ದೆ, 1951ಕ್ಕೆ ಅನುಗುಣವಾಗಿಲ್ಲ ಎಂದು ವಾದಿಸಿದ್ದಾರೆ. ಫಲಿತಾಂಶ ಘೋಷಣೆಯೇ ಅಕ್ರಮ ಎಂದು ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆಗಳೂ ಇವೆ.

ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನದಂದು ಕಾಂಗ್ರೆಸ್ ಅಭ್ಯರ್ಥಿ ನೀಲೇಸ್ ಕುಂಭಾನಿ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದರು. ಇತರ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದರಿಂದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿತ್ತು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಗುಜರಾತ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಕೆಯಾಗಿತ್ತು. ಅದನ್ನು ತಿರಸ್ಕರಿಸಿದ್ದ ಹೈಕೋರ್ಟ್, ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT