ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪದರ್ಶಿ ಆತ್ಮಹತ್ಯೆ: ಕ್ರಿಕೆಟಿಗನ ವಿಚಾರಣೆ

Published 6 ಮಾರ್ಚ್ 2024, 13:13 IST
Last Updated 6 ಮಾರ್ಚ್ 2024, 13:13 IST
ಅಕ್ಷರ ಗಾತ್ರ

ಸೂರತ್‌: ರೂಪದರ್ಶಿ ತಾನ್ಯಾ ಸಿಂಗ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಐಪಿಎಲ್‌ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ನಗರದಲ್ಲಿ ಪೊಲೀಸರು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಏಳು ತಿಂಗಳ ಹಿಂದಿನವರೆಗೆ ಶರ್ಮಾ ಅವರು ತಾನ್ಯಾ ಜೊತೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಅವರನ್ನು ಮಂಗಳವಾರ ವೆಸು ಪೊಲೀಸ್‌ ಠಾಣೆಗೆ ಕರೆಸಿ ವಿಚಾರಣೆ ನಡೆಸಿ ನಂತರ ಕಳುಹಿಸಲಾಯಿತು.

28 ವರ್ಷದ ತಾನ್ಯಾ ಅವರ ಮೃತದೇಹ ಇಲ್ಲಿನ ವೆಸು ಪ್ರದೇಶದ ಅವರ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಫೆ 19ರಂದು ಪತ್ತೆಯಾಗಿತ್ತು. ಪಂಜಾಬ್‌ನವರಾದ ಶರ್ಮಾ ಅವರನ್ನು ಹೇಳಿಕೆ ನೀಡಲು ಬರುವಂತೆ ಪೊಲೀಸರು ಸೂಚಿಸಿದ್ದರು.

ಈ ಹಿಂದೆ ಇಬ್ಬರೂ ಸಂಪರ್ಕದಲ್ಲಿದ್ದರು ಮತ್ತು ರೂಪದರ್ಶಿಯು ಅಭಿಷೇಕ್ ಅವರಿಗೆ ಮೊಬೈಲ್‌ ಸಂದೇಶಗಳನ್ನು ಕಳುಹಿಸಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ರಣಜಿ ಆಡಿರುವ ಅಭಿಷೇಕ್‌, ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ (ಹಾಲಿ ಡೆಲ್ಲಿ ಕ್ಯಾಪಿಟಲ್ಸ್) ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT