ನವದೆಹಲಿ (ಪಿಟಿಐ): ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಸಿಜೆಐ ಬಿ.ಆರ್. ಗವಾಯಿ ಅವರು ಭಾನುವಾರ ನಿವೃತ್ತರಾದರು.

ಸೂರ್ಯ ಕಾಂತ್ ಅವರನ್ನು ಮುಂದಿನ ಸಿಜೆಐ ಆಗಿ, ಅಕ್ಟೋಬರ್ 30ರಂದು ನೇಮಕ ಮಾಡಲಾಯಿತು. 15 ತಿಂಗಳು ಈ ಹುದ್ದೆಯಲ್ಲಿರುವ ಇವರು, 65 ವರ್ಷ ವಯಸ್ಸು ತಲುಪಿದ ಬಳಿಕ 2027ರ ಫೆ.9ರಂದು ನಿವೃತ್ತರಾಗಲಿದ್ದಾರೆ.

ಹರಿಯಾಣದ ಹಿಸ್ಸಾರ್ನಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ ಸೂರ್ಯ ಕಾಂತ್ ಅವರು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿಯಾಗಿ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದಾರೆ. ಬಳಿಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು.

ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಹಾಗೂ ಬಿಹಾರದಲ್ಲಿ ಮತರಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಕುರಿತ ಪ್ರಕರಣ ಸೇರಿದಂತೆ ಹಲವು ಮಹತ್ವದ ತೀರ್ಪು ನೀಡಿದ ಪೀಠಗಳಲ್ಲಿ ಸೂರ್ಯ ಕಾಂತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.