ಪಟ್ನಾ: ರಾಜ್ಯಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿಸುಶೀಲ್ ಕುಮಾರ್ ಮೋದಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್, ಮಾಜಿ ಮುಖ್ಯಮಂತ್ರಿ ಜಿತನ್ ರಾಂ ಮಾಂಝಿ ಹಾಗೂ ಬಿಜೆಪಿಯ ಹಿರಿಯ ಮುಖಂಡರು ಸುಶೀಲ್ ಜೊತೆಗಿದ್ದರು.

ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ ನೇತೃತ್ವದ ಹಿಂದಿನ ಸರ್ಕಾರಗಳಲ್ಲಿ ಸುಶೀಲ್ ಮೋದಿ ಉಪಮುಖ್ಯಮಂತ್ರಿಯಾಗಿದ್ದರು. ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಅವರು ಈ ಬಾರಿ ಈ ಹುದ್ದೆ ಬಿಟ್ಟುಕೊಟ್ಟಿದ್ದರು.

ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ರಾಮ್ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾದ ಸ್ಥಾನಕ್ಕೆ ಇದೇ 14ರಂದು ಚುನಾವಣೆ ನಿಗದಿಯಾಗಿದೆ. ಮಹಾ ಘಟಬಂಧನ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಅವಿರೋಧ ಆಯ್ಕೆಯಾಗುವ ಸಂಭವವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.