ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿ. ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ಬಿಜೆಪಿಯಿಂದ ಟಿಕೆಟ್‌

Published 2 ಮಾರ್ಚ್ 2024, 16:22 IST
Last Updated 2 ಮಾರ್ಚ್ 2024, 16:22 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮಾಜಿ ವಿದೇಶಾಂಗ ಸಚಿವೆ, ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ಬಿಜೆಪಿ ನವದೆಹಲಿಯಿಂದ ಟಿಕೆಟ್‌ ಘೋಷಣೆ ಮಾಡಿದೆ.

ಶನಿವಾರ ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಬಾನ್ಸುರಿ ಸ್ವರಾಜ್‌ ಅವರ ಹೆಸರು ಕೂಡ ಸೇರಿದೆ. ಅವರು ನವದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಬಾನ್ಸುರಿ ಸ್ವರಾಜ್‌ ವೃತ್ತಿಯಲ್ಲಿ ವಕೀಲೆಯಾಗಿದ್ದಾರೆ. ಕಳೆದ ವರ್ಷ ದೆಹಲಿ ಬಿಜೆಪಿಯು ಅವರನ್ನು ಬಿಜೆಪಿ ಕಾನೂನು ಕೋಶದ ಸಹ-ಸಂಚಾಲಕರಾಗಿ ನೇಮಿಸಿತು.

ಬಾನ್ಸುರಿ ಸ್ವರಾಜ್‌ ಲಂಡನ್‌ನಲ್ಲಿ ಕಾನೂನು ಪದವಿ ಹಾಗೂ ಸ್ನಾತಕೋತರ ಪದವಿ ಪಡೆದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT