ಇಂಫಾಲ್: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ಬುಧವಾರ ನಡೆಸಿದ ದಾಳಿಯಲ್ಲಿ ಮೂವರು ಕ್ರೈಸ್ತ ನಾಯಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಥಾಡೋ ಬ್ಯಾಪ್ಟಿಸ್ಟ್ ಅಸೋಸಿಯೇಷನ್(ಟಿಬಿಎ) ಸದಸ್ಯರು ಚುರಾಚಾಂದ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದೆ. ಅವರು ಪ್ರಯಾಣಿಸುತ್ತಿದ್ದ ಎರಡು ವಾಹನಗಳ ಮೇಲೆ ಶಂಕಿತ ಬಂಡುಕೋರರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಕಿಗಳು ಬಹುಸಂಖ್ಯಾತರಾಗಿರುವ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ದಾಳಿಯ ಬಳಿಕ ಸಂಪೂರ್ಣ ಬಂದ್ ಆಚರಿಸಲಾಗಿದೆ. ನಾಗಾ ಸಮುದಾಯದ ಶಾಸಕರ ತಂಡ ಮತ್ತು ಕುಕಿ ಸಂಘಟನೆಯೊಂದು ಹತ್ಯೆಯನ್ನು ಖಂಡಿಸಿದೆ.

ದಾಳಿಯ ಹಿಂದೆ ಮೈತೇಯಿ ಸಮುದಾಯದ ಕೈವಾಡವಿದೆ ಎಂಬ ಆರೋಪಗಳನ್ನು ಮೈತೇಯಿ ಸಮುದಾಯದ ಸಂಘಟನೆಯೊಂದು ತಿರಸ್ಕರಿಸಿದೆ.

‘ಮೃತರಲ್ಲಿ ಮಣಿಪುರ ಬ್ಯಾಪ್ಟಿಸ್ಟ್ ಕನ್ವೆನ್ಷನ್ನ ಮಾಜಿ ಪ್ರಧಾನ ಕಾರ್ಯದರ್ಶಿ ವಿ. ಸಿತ್ಲೋರ್ ಅವರೂ ಸೇರಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯನ್ನು ಖಂಡಿಸಿರುವ ಮಣಿಪುರ ಮುಖ್ಯಮಂತ್ರಿ ವೈ.ಖೇಮಚಂದ್ ಸಿಂಗ್ ಅವರು, ‘ಹಿಂಸಾಚಾರವು ಶಾಂತಿಗೆ ಧಕ್ಕೆ ತರುತ್ತದೆ. ಸಮಾಜದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಮರ್ಥನೆ ಇಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.