ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ | ಕಲುಷಿತ ಆಹಾರ ಸೇವನೆ ಶಂಕೆ; 169 ಮಕ್ಕಳು ಆಸ್ಪತ್ರೆಗೆ ದಾಖಲು

Published 28 ಆಗಸ್ಟ್ 2023, 16:05 IST
Last Updated 28 ಆಗಸ್ಟ್ 2023, 16:05 IST
ಅಕ್ಷರ ಗಾತ್ರ

ಸಂಗ್ಲಿ: ಮಹಾರಾಷ್ಟ್ರದ ಉಮಾದಿ ಗ್ರಾಮದಲ್ಲಿನ ಸರ್ಕಾರಿ ವಸತಿ ಶಾಲೆಯ 160ಕ್ಕೂ ಹೆಚ್ಚು ಮಕ್ಕಳು ಸೋಮವಾರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ವಿಷಾಹಾರ ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

ಉಮಾದಿ ಗ್ರಾಮದಲ್ಲಿನ ಬುಡಕಟ್ಟು ಜನಾಂಗದ ಮಕ್ಕಳಿರುವ ‘ಆಶ್ರಮ ಶಾಲಾ’ದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. 

ಅಸ್ವಸ್ಥಗೊಂಡವರಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳೇ ಹೆಚ್ಚಿದ್ದಾರೆ, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ರಾತ್ರಿ ಊಟದ ಬಳಿಕ 169 ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜಾ ದಯಾನಿಧಿ ಮಾಹಿತಿ ನೀಡಿದ್ದಾರೆ.

ಜೊತೆಗೆ ಘಟನೆ ಕುರಿತು ತನಿಖೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT