ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಸೇರ್ಪಡೆಯಾದ ಸಂಸದೆ ಪರನೀತ್ ಕೌರ್

Published 14 ಮಾರ್ಚ್ 2024, 16:08 IST
Last Updated 14 ಮಾರ್ಚ್ 2024, 16:08 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ನಿಂದ ಅಮಾನತುಗೊಂಡಿದ್ದ, ಲೋಕಸಭೆಯ ಸದಸ್ಯೆ ಪರನೀತ್ ಕೌರ್ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಕೌರ್ ಪಂಜಾಬ್‌ನ ಪಟಿಯಾಲದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದರು.

ಇವರು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್ ಅವರ ಪತ್ನಿ. ಅಮರೀಂದರ್ ಸಿಂಗ್ ಅವರು ಕಳೆದ ವರ್ಷದ ಫೆಬ್ರುವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆ ಬೆಳವಣಿಗೆಯ ನಂತರ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಕಾಂಗ್ರೆಸ್‌ ಪಕ್ಷವು ಪರನೀತ್ ಕೌರ್ ಅವರನ್ನು ಅಮಾನತುಪಡಿಸಿತ್ತು.

ಪಕ್ಷ ಸೇರ್ಪಡೆ ಬಳಿಕ ಬಿಜೆಪಿ ಮುಖಂಡರ ಜೊತೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರನೀತ್ ಕೌರ್ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ಉತ್ತಮ ಸಾಧನೆಯಾಗಿದೆ ಎಂದು ಶ್ಲಾಘಿಸಿದರು.

‘ಮೋದಿ ಅವರ ನೇತೃತ್ವ ಹಾಗೂ ನೀತಿಗಳಿಂದಾಗಿ ದೇಶ ಹಾಗೂ ನಮ್ಮ ಮಕ್ಕಳ ಭವಿಷ್ಯ ಸುಭದ್ರವಾಗಿದೆ ಎಂಬ ಬಗ್ಗೆ ನನಗೆ ವಿಶ್ವಾಸವಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT