ನವದೆಹಲಿ: ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ನಿಯಂತ್ರಣಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ.

‘ಕೊರೊನಾ ಪ್ರಕರಣಗಳ ಏರಿಳಿತವನ್ನು ಆಧರಿಸಿ ಆಯ್ದ ಕೆಲವೊಂದು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ‘ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ತಿಳಿಸಿದೆ.

ಕೋವಿಡ್–19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2020ರ ಮಾರ್ಚ್ 23ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೆ, ವಂದೇ ಭಾರತ್ ಮಿಷನ್ ಯೋಜನೆಯಡಿ ಮೇ 2020ರಿಂದ ವಿಶೇಷ ವಿಮಾನಗಳು ಸಂಚರಿಸುತ್ತಿವೆ.

ಇದನ್ನೂ ಓದಿ... ಲಾಟರಿ ಮೂಲಕ ಎಚ್–1ಬಿ ವೀಸಾ ಅರ್ಜಿದಾರರ ಅಯ್ಕೆ: ಅಮೆರಿಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.