ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಬೈ | 17 ವರ್ಷದ ಯುವಕ ಚಲಾಯಿಸುತ್ತಿದ್ದ ಎಸ್‌ಯುವಿ ಡಿಕ್ಕಿ, ಬೈಕ್‌ ಸವಾರ ಸಾವು

Published : 30 ಆಗಸ್ಟ್ 2024, 3:17 IST
Last Updated : 30 ಆಗಸ್ಟ್ 2024, 3:17 IST
ಫಾಲೋ ಮಾಡಿ
Comments

ಮುಂಬೈ: 17 ವರ್ಷದ ಯುವಕ ಚಲಾಯಿಸುತ್ತಿದ್ದ ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಗೋರೆಗಾಂವ್ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ 24 ವರ್ಷದ ನವೀನ್ ವೈಷ್ಣವ್ ಬೈಕ್‌ನಲ್ಲಿ ಹಾಲು ಹಂಚಿಕೆ ಮಾಡಲು ತೆರಳುತ್ತಿದ್ದರು. ಇದೇ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಎಸ್‌ಯುವಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನವೀನ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೈಕ್‌ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ 17 ವರ್ಷದ ಯುವಕ ಓಡಿಹೋಗಲು ಯತ್ನಿಸಿದ್ದಾನೆ. ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ಸಂಬಂಧ ಎಸ್‌ಯುವಿ ಮಾಲೀಕ ಇಕ್ಬಾಲ್ ಜಿವಾನಿ (48) ಮತ್ತು ಅವರ ಮಗ ಮೊಹಮ್ಮದ್ ಫಾಜ್ ಇಕ್ಬಾಲ್ ಜಿವಾನಿ (21) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಸ್‌ಯುವಿ ಚಲಾಯಿಸುತ್ತಿದ್ದ ಯುವಕ ಮದ್ಯದ ಅಮಲಿನಲ್ಲಿದ್ದರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಆತನ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಪಘಾತಕ್ಕೂ ಮುನ್ನ ಆರೋಪಿ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೇ 19ರಂದು ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ 17 ವರ್ಷದ ಹುಡುಗನೊಬ್ಬ ತನ್ನ ಪೋರ್ಸೆ ಕಾರಿನಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್‌ವೇರ್‌ ಎಂಜಿಯರ್‌ ಸಾವಿಗೆ ಕಾರಣನಾಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT