ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರಕಾಂತ್ ರಥ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ರಾಜ್ಕುಮಾರ್ ಸಿಂಗ್ ಅಲಿಯಾಸ್ ರಾಜ್ಸಿಂಗ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ.

ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ಸಿಬಿಐ ತಂಡ ರಾಜ್ ಸಿಂಗ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡ ಎರಡು ದಿನಗಳ ನಂತರ ಮೇ 6ರಂದು ಮಧ್ಯಮ್ಗ್ರಾಮ್ನಲ್ಲಿ ರಥ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಡಿಐಜಿ ನೇತೃತ್ವದ ಏಳು ಸದಸ್ಯರ ವಿಶೇಷ ತನಿಖಾ ತಂಡ ಆರೋಪಿಗೆ ಶೋಧ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.