ಕೋಲ್ಕತ್ತ: ಅಂಗರಕ್ಷಕ ಸಾವಿಗೀಡಾದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಸಿಐಡಿ ವಿಚಾರಣೆಗೆ ಗೈರು ಹಾಜರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಸುವೇಂದು ಅವರ ಅಂಗರಕ್ಷಕರಾಗಿದ್ದ ಸುಭಬ್ರತಾ ಚಕ್ರವರ್ತಿ ಅವರ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಬಾನಿ ಭವನದಲ್ಲಿರುವ ಸಿಐಡಿಯ ಪ್ರಧಾನ ಕಚೇರಿಗೆ ಹಾಜರಾಗುವಂತೆ ಸುವೇಂದು ಅವರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿತ್ತು.

‘ರಾಜಕೀಯಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ತೊಡಗಿರುವುದರಿಂದ ಸಿಐಡಿ ಕಚೇರಿಗೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಸುವೇಂದು ಅವರು ಇ–ಮೇಲ್ ಕಳುಹಿಸಿದ್ದರು’ ಎಂದು ಸಿಐಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

‘ಇದರ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಸಭೆ ನಡೆಸಿದ್ದು, ಈ ಸಭೆಯಲ್ಲಿ ಪ್ರಕರಣದ ತನಿಖೆಯ ಕುರಿತಾದ ಮುಂದಿನ ಕ್ರಮಗಳು ಮತ್ತು ಸುವೇಂದು ಅಧಿಕಾರಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಬೇಕೇ ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.

2018ರಲ್ಲಿ ಸುಭಬ್ರತಾ ಚಕ್ರವರ್ತಿ ಅವರು ಸುವೇಂದು ಅವರ ಕಾಂತಿ ನಿವಾಸದಲ್ಲಿ ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.