ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಉತ್ತರ ಪ್ರದೇಶದಲ್ಲಿ ಅಡಗಿದ್ದ ಈ ಮೂವರು ಆರೋಪಿಗಳನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಭಾನುವಾರ ವಶಕ್ಕೆ ಪಡೆದಿತ್ತು. ಬಳಿಕ ಅವರನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಾರಾಸತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
.Video | ಪೊಲೀಸರ ಎದುರೇ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ಹಲ್ಲೆ: ಆಗಿದ್ದೇನು?.ಭಾರತ ಯಾರ ಮುಂದೆಯೂ ತಲೆಬಾಗದು: ಸೋಮನಾಥದಲ್ಲಿ ಪ್ರಧಾನಿ ಮೋದಿ .
ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ತಂಡವು ಎರಡು ವಾರಗಳ ಕಾಲ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ನ್ಯಾಯಾಲಯವು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಅನುಮತಿ ನೀಡಿದ್ದು, ಮೇ 24ರಂದು ಮತ್ತೆ ಹಾಜರುಪಡಿಸುವಂತೆ ಸೂಚಿಸಿದೆ.

ಮೇ 6ರಂದು ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ಗ್ರಾಮ್ ಪ್ರದೇಶದ ಜೆಸ್ಸೋರ್ ರಸ್ತೆಯಲ್ಲಿ ಚಂದ್ರನಾಥ್ ರಥ್ ಹತ್ಯೆ ನಡೆದಿತ್ತು. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ನಂತರ ನಡೆದ ಈ ಘಟನೆಯನ್ನು ಬಿಜೆಪಿ ನಾಯಕರು ಯೋಜಿತ ಕೃತ್ಯ ಎಂದಿದ್ದರು.
.Video | ಪೊಲೀಸರ ಎದುರೇ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ಹಲ್ಲೆ: ಆಗಿದ್ದೇನು?.IPL 2026ರಿಂದ ಎರಡು ತಂಡಗಳು ಹೊರಕ್ಕೆ: 4 ಸ್ಥಾನಗಳಿಗಾಗಿ 6 ತಂಡಗಳ ಪೈಪೋಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.