ನವದೆಹಲಿ:ಅಂಕಣಕಾರ ಹಾಗೂ ಪತ್ರಕರ್ತ ಸ್ವಪನ್ ದಾಸ್‌ಗುಪ್ತ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಮಂಗಳವಾರ
ರಾಜೀನಾಮೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ವಪನ್ ದಾಸ್‌ಗುಪ್ತ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ವಪನ್ ದಾಸ್‌ಗುಪ್ತ ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಾಗಿದ್ದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮಂಗಳವಾರ ಸಂಜೆ ಅಥವಾ ಬುಧವಾರ ರಾಜೀನಾಮೆ ಅಂಗೀಕರವಾಗಲಿದೆ ಎನ್ನಲಾಗಿದೆ.

ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಾಗಿರುವವರು ರಾಜಕೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವೆ? ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೋಮವಾರ ರಾಜ್ಯಸಭೆಯಲ್ಲಿ ಪ್ರಶ್ನೆ ಮಾಡಿದ್ದರು.ಇದರ ಬೆನ್ನಲ್ಲೇ ದಾಸ್‌ಗುಪ್ತ ರಾಜೀನಾಮೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.