ಸಮಸ್ಟಿಪುರ (ಬಿಹಾರ): ಜಯನಗರ-ನವದೆಹಲಿ ನಡುವೆ ಸಂಚರಿಸುವ ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ಗೆ ಬಿಹಾರದ ಸಮಸ್ಟಿಪುರ ರೈಲು ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೂರ್ವ ಕೇಂದ್ರ ರೈಲ್ವೆ (ಇಸಿಆರ್) ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ 9.50ರ ಸುಮಾರಿಗೆ ರೈಲು ನಿಲ್ದಾಣದ ಹೊರ ಸಿಗ್ನಲ್ ತಲುಪಿದಾಗ ಈ ಘಟನೆ ನಡೆದಿದೆ. ಕಲ್ಲು ತೂರಾಟ ನಡೆದ ತಕ್ಷಣ ಎಚ್ಚೆತ್ತ ಲೋಕೊ ಪೈಲಟ್ ರೈಲು ನಿಲ್ಲಿಸಿದ್ದು, ಸ್ವಲ್ಪ ಸಮಯದ ನಂತರ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಸ್ಥಳಕ್ಕೆ ತಲುಪಿದರು. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಆದರೆ ಪ್ಯಾಂಟ್ರಿ ಕಾರು ಸೇರಿ ಮೂರು ಕೋಚ್ಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

‘ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ಹೊರ ಸಿಗ್ನಲ್ ತಲುಪಿದಾಗ ಸಮಸ್ಟಿಪುರ ರೈಲು ನಿಲ್ದಾಣದ ಬಳಿ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಪ್ಯಾಂಟ್ರಿ ಕಾರು ಸೇರಿ ಮೂರು ಬೋಗಿಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಪ್ಯಾಂಟ್ರಿ ಕಾರಿನ ಕಿಟಕಿ ಫಲಕಗಳು ಮತ್ತು ಎ 1 ಮತ್ತು ಬಿ 2 ಎರಡು ಕೋಚ್ಗಳು ಹಾನಿಗೊಳಗಾಗಿವೆ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ’ ಎಂದು ಸಮಸ್ಟಿಪುರ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಕೆ. ಸಿಂಗ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.