ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Published 15 ಜೂನ್ 2024, 10:01 IST
Last Updated 15 ಜೂನ್ 2024, 10:01 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಆಪ್ತ ಬಿಭವ್‌ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಜೂನ್‌ 22ರ ವರೆಗೆ ವಿಸ್ತರಿಸಿದೆ.

ಬಿಭವ್‌ ಅವರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಎದುರು ಇಂದು (ಶನಿವಾರ) ವಿಚಾರಣೆಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ, ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಜೊತೆಗೆ, ಬಿಭವ್ ಅವರನ್ನು ಜೂನ್‌ 22ರಂದು ನ್ಯಾಯಾಲಯದ ಎದುರು ಕರೆತರುವಂತೆ ದೆಹಲಿ ಪೊಲೀಸರಿಗೆ  ನಿರ್ದೇಶನ ನೀಡಿದೆ.

ಆಮ್‌ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಅವರಿಗೆ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸದಲ್ಲಿ ಮೇ 13ರಂದು ಥಳಿಸಿದ ಆರೋಪ ಬಿಭವ್‌ ಮೇಲಿದೆ. ಈ ಸಂಬಂಧ ಮೇ 16ರಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಬಿಭವ್‌ ಅವರನ್ನು ಮೇ 18ರಂದು ಬಂಧಿಸಿದ್ದಾರೆ.

ಬಿಭವ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಅದೇ ದಿನ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು, ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತ್ತು. ಬಳಿಕ ಮೇ 24ರಂದು ನಾಲ್ಕು ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ, ನಂತರ ಮೂರು ದಿನ ಪೊಲೀಸ್‌ ಕಸ್ಟಡಿಗೆ ವಹಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT