ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಲಿವಾಲ್ ಪ್ರಕರಣ: ಬಿಭವ್ ಮೇಲ್ಮನವಿ ಕುರಿತ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್

Published 31 ಮೇ 2024, 9:07 IST
Last Updated 31 ಮೇ 2024, 9:07 IST
ಅಕ್ಷರ ಗಾತ್ರ

ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ಕಾಯ್ದಿರಿಸಿತು.

ಎರಡೂ ಕಡೆಯ ಹಿರಿಯ ವಕೀಲರ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಸ್ವರಣಾ ಶರ್ಮಾ ಅವರು ತೀರ್ಪನ್ನು ಕಾಯ್ದಿರಿಸಿದರು. 

ಬಿಭವ್‌ ಅವರು ತಮ್ಮ ಬಂಧನ ಕಾನೂನು ಬಾಹಿರವಾಗಿದ್ದು, ಅಪರಾಧ ಪ್ರಕ್ರಿಯಾ ಸಂಹಿತೆ ಸೆಕ್ಷನ್‌ 41ಎ ಉಲ್ಲಂಘನೆಯಾಗಿದೆ ಎಂದು ಘೋಷಿಸಲು ಅರ್ಜಿಯಲ್ಲಿ ಕೋರಿದ್ದಾರೆ. ತಮ್ಮ ಅಕ್ರಮ ಬಂಧನಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಮತ್ತು ತನ್ನ ಬಂಧನದ ನಿರ್ಧಾರ ತೆಗೆದುಕೊಳ್ಳುವಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಜರುಗಿಸಬೇಕು ಎಂದೂ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಸೆಕ್ಷನ್‌ 41ಎ ಅನುಸರಣೆಗೆ ಸಂಬಂಧಿಸಿದ ಆಕ್ಷೇಪಣೆಯನ್ನು ಈಗಾಗಲೇ ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಅರ್ಜಿದಾರರು ಈ ಸಂಬಂಧ ರಿಟ್‌ ಅರ್ಜಿ ಸಲ್ಲಿಸುವ ಬದಲಿಗೆ ಆ ಆದೇಶದ ಪರಿಷ್ಕರಣೆಗೆ ಕೋರಬಹುದು ಎಂದು ದೆಹಲಿ ಪೊಲೀಸರ ಪರ ವಕೀಲರು ವಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT