ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಮೆಟ್ರೊದಲ್ಲಿ ಯುವಕ ಹಸ್ತಮೈಥುನ: ಸ್ವಾತಿ ಮಲಿವಾಲ್ ದೂರು

Published 28 ಏಪ್ರಿಲ್ 2023, 10:09 IST
Last Updated 28 ಏಪ್ರಿಲ್ 2023, 10:09 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮೆಟ್ರೊ ರೈಲಿನಲ್ಲಿ ಪ್ರಯಾಣಿಕರ ಮಧ್ಯೆ ಯುವಕನೊಬ್ಬ ಹಸ್ತಮೈಥುನ ಮಾಡಿಕೊಂಡಿರುವ ಘಟನೆ ಬಗ್ಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಮೆಟ್ರೊ ರೈಲಿನಲ್ಲಿ ಯುವಕನೊಬ್ಬ ಪ್ರಯಾಣಿಕರ ನಡುವೆಯೇ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ವೇಳೆ ಸಾಕಷ್ಟು ಮಹಿಳಾ ಪ್ರಯಾಣಿಕರು ಇದ್ದರು ಎಂದು ಹಲವರು ದೂರಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಈ ಘಟನೆ ವರದಿಯಾದ ನಂತರ ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಲಿವಾಲ್ ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಪೊಲೀಸರು ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ದೆಹಲಿ ಮೆಟ್ರೊದಲ್ಲಿ ಯುವಕನೊಬ್ಬ ನಾಚಿಕೆಯಿಲ್ಲದೆ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ತುಂಬಾ ಅಸಹ್ಯಕರ, ನೋವಿನ ಸಂಗತಿ. ಆ ಯುವಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೊಗೆ ಸೂಚನೆ ನೀಡಿದ್ದೇನೆ  ಎಂದು ಟ್ವಿಟರ್​​ನಲ್ಲಿ ಸ್ವಾತಿ ಮಲಿವಾಲ್ ತಿಳಿಸಿದ್ದಾರೆ.

ಈ ಘಟನೆ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಹಲವರಿಗೆ ಮುಜುಗರ ಉಂಟಾಯಿತು ಎಂದು ಪ್ರಯಾಣಿಕರೊಬ್ಬರು ದೂರಿದ್ದಾರೆ. ಮೆಟ್ರೊದಲ್ಲೂ ಪೊಲೀಸರೊಬ್ಬರು ಬೇಕು ಎಂದು ಹಲವಾರು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT