ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಆಯೋಗಕ್ಕೆ ಹೊಸ ಆಯಾಮ ನೀಡಿದ್ದ ಶೇಷನ್‌ ಇನ್ನಿಲ್ಲ

Last Updated 10 ನವೆಂಬರ್ 2019, 20:23 IST
ಅಕ್ಷರ ಗಾತ್ರ

ಚೆನ್ನೈ: ಸುಧಾರಣಾ ಪ್ರಕ್ರಿಯೆಗಳ ಮೂಲಕ ಚುನಾವಣಾ ಆಯೋಗಕ್ಕೆ ಹೊಸ ಆಯಾಮ ನೀಡಿದ್ದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್‌. ಶೇಷನ್‌ (86) ಭಾನುವಾರ ರಾತ್ರಿ ಚೆನ್ನೈನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

1990ರ ಡಿಸೆಂಬರ್‌ 12ರಿಂದ 1996ರ ಡಿಸೆಂಬರ್‌ 11ರ ಅವಧಿಯಲ್ಲಿ 10ನೇ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಶೇಷನ್ ಅವರು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕ ತರುವ ಮೂಲಕ ಆಯೋಗದ ಕಾರ್ಯಶೈಲಿ ಬದಲಿಸಿ ದೇಶದ ಗಮನ ಸೆಳೆದಿದ್ದರು. ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ ರಾಜಕಾರಣಿಗಳ ಆಕ್ರೋಶಕ್ಕೂ ಗುರಿಯಾಗಿದ್ದರು.

ಭಾರತೀಯ ಆಡಳಿತ ಸೇವೆಯ 1955ರ ಬ್ಯಾಚ್‌ನ ತಮಿಳುನಾಡು ಕೇಡರ್‌ನ ಅಧಿಕಾರಿಯಾಗಿದ್ದ ಅವರು, ಚುನಾವಣೆ ಸುಧಾರಣೆಗೆ ಶ್ರಮಿಸಿದ್ದಕ್ಕಾಗಿ ಪ್ರತಿಷ್ಠಿತ ರೇಮನ್‌ ಮ್ಯಾಗ್ಸೆಸ್ಸೆ ಪ್ರಶಸ್ತಿಗೂ ಭಾಜನರಾಗಿದ್ದರು. ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ 1932ರ ಡಿಸೆಂಬರ್‌ 15ರಂದು ಜನಿಸಿದ್ದರು.

1997ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಕೆ.ಆರ್‌. ನಾರಾಯಣ್‌ ಅವರ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT