ಶ್ರೀನಗರ: ಯೋಧರೊಬ್ಬರು ಕಣ್ಮರೆಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಅವರ ವಾಹನವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಯೋಧನನ್ನು ದುಷ್ಕರ್ಮಿಗಳು ಅಪಹರಿಸಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

‘ಸೋಫಿಯಾನ್ ಜಿಲ್ಲೆಯ ನಿವಾಸಿಯಾಗಿರುವ ಮುಜಾಫರ್ ಮಂಜೂರ್ ಅವರ ಹೆಸರಿನಲ್ಲಿ ಈ ವಾಹನವು ನೋಂದಣಿಯಾಗಿದೆ. ಮಂಜೂರ್ ಕೂಡ ಟೆರಿಟೋರಿಯಲ್ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರೂ ಸಂಪರ್ಕಕ್ಕೆ ಸಿಕ್ಕಿಲ್ಲ. ದಕ್ಷಿಣ ಕಾಶ್ಮೀರದ ಕುಲಗಾಮ್ ಜಿಲ್ಲೆಯ ರಾಮ್‌ಭಾಮಾ ಪ್ರದೇಶದಲ್ಲಿ ವಾಹನ ಪತ್ತೆಯಾಗಿದೆ. ಇದಕ್ಕೆ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳ ಪತ್ತೆ ಕಾರ್ಯ ಆರಂಭಿಸಿದ್ದೇವೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.