ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಬ್ಲೀಗ್‌ ಜಮಾತ್‌ನ 75 ಮಂದಿಗೆ ಜಾಮೀನು

Last Updated 11 ಜುಲೈ 2020, 15:36 IST
ಅಕ್ಷರ ಗಾತ್ರ

ನವದೆಹಲಿ: ವೀಸಾ ನಿಯಮ ಮತ್ತು ಸರ್ಕಾರದ ಕೋವಿಡ್‌–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅಕ್ರಮವಾಗಿ ತಬ್ಲೀಗ್‌ ಜಮಾತ್ ಸಭೆಯಲ್ಲಿ ಭಾಗವಹಿಸಿದ ಆರೋಪಿಗಳಾಗಿದ್ದ ಥಾಯ್ಲೆಂಡ್ ಮತ್ತು ನೇಪಾಳದ 75 ಪ್ರಜೆಗಳಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ.

ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಧೀಶರಾದ ಗುರ್‌ಮೊಹಿನಾ ಕೌರ್ ಅವರು ಆರೋಪಿಗಳಿಂದ ತಲಾ ₹ 10 ಸಾವಿರ ವೈಯಕ್ತಿಕ ಬಾಂಡ್ ಬರೆಸಿಕೊಂಡು ಜಾಮೀನು ಮಂಜೂರು ಮಾಡಿದ್ದಾರೆ.

ಈ ಪ್ರಕರಣದಲ್ಲಿ ಚಾರ್ಚ್‌ಶೀಟ್‌ನಲ್ಲಿದ್ದ 33 ವಿವಿಧ ದೇಶಗಳ 445 ವಿದೇಶಿ ಪ್ರಜೆಗಳಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

36 ದೇಶಗಳ 957 ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು 59 ಚಾರ್ಜ್‌ಶೀಟ್ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT