ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ವರ್ಷಗಳ ಪ್ರಗತಿ ಬಗ್ಗೆ NAMO ಆ್ಯಪ್‌ನಲ್ಲಿ ಅಭಿಪ್ರಾಯ ಹಂಚಿಕೊಳ್ಳಿ: ಮೋದಿ

Published 2 ಜನವರಿ 2024, 4:25 IST
Last Updated 2 ಜನವರಿ 2024, 4:25 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 10 ವರ್ಷಗಳಲ್ಲಿ ಭಾರತವು ಸಾಧಿಸಿದ ಪ್ರಗತಿಯ ಕುರಿತು ಜನಮಾನಸದಲ್ಲಿರುವ ಅಭಿಪ್ರಾಯಗಳನ್ನು ತಮ್ಮ ಜೊತೆ ಹಂಚಿಕೊಳ್ಳುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಗರಿಕರಿಗೆ ಮನವಿ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿಯವರ ಕಚೇರಿಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಕಳೆದ 10 ವರ್ಷಗಳಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು? ಅದನ್ನು NaMo ಆ್ಯಪ್‌ನಲ್ಲಿ ಜನ ಮನ ಸಮೀಕ್ಷೆಯಲ್ಲಿ ನಿಮ್ಮ ಪ್ರತಿಕ್ರಿಯೆಯನ್ನು ನೇರವಾಗಿ ನನ್ನೊಂದಿಗೆ ಹಂಚಿಕೊಳ್ಳಿ!’ ಎಂದು ಮೋದಿ ಸಹ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದೇ ವರ್ಷ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಅದಕ್ಕೂ ಮುನ್ನವೇ ಜನವರಿ 22ರಂದು ರಾಮ ಮಂದಿರ ಪ್ರತಿಷ್ಠಾಪನೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT