ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ| ಕಾಂಗ್ರೆಸ್ ಜೊತೆ ಮೈತ್ರಿ ಮಾತುಕತೆ ಪ್ರಗತಿಯಲ್ಲಿದೆ: ಅಖಿಲೇಶ್

Published 20 ಜನವರಿ 2024, 15:00 IST
Last Updated 20 ಜನವರಿ 2024, 15:00 IST
ಅಕ್ಷರ ಗಾತ್ರ

ಲಕ್ನೋ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತುಕತೆ ಪ್ರಗತಿಯಲ್ಲಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ತಿಳಿಸಿದರು.

ಇಲ್ಲಿನ ಎಸ್‌ಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್, ದೆಹಲಿಯಲ್ಲಿ ಹಲವು ಸಭೆಗಳು ನಡೆದಿವೆ. ನಾವು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸುತ್ತಿದ್ದೇವೆ. ಅಂತಿಮವಾಗಿ ಒಂದು ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಉತ್ತರ ಪ್ರದೇಶದಲ್ಲಿ ಎಸ್‌ಪಿ ಮತ್ತು ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದಕ್ಕೆ ಬಂದ ಒಂದು ದಿನದ ಬಳಿಕ ಯಾದವ್ ಈ ಹೇಳಿಕೆ ನೀಡಿದ್ದಾರೆ.

ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್‌, ಟಿಎಂಸಿ, ಡಿಎಂಕೆ ಮತ್ತು ಎಎಪಿ ಸೇರಿದಂತೆ 28 ಪಕ್ಷಗಳು ಸೇರಿ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ)ವನ್ನು ರಚಿಸಲಾಗಿದೆ. ಎಸ್‌ಪಿ ಕೂಡ ಈ ಬಣದ ಭಾಗವಾಗಿದೆ. ಸದ್ಯ ಇಂಡಿಯಾ ಕೂಟ ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸುತ್ತಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಎಸ್‌ಪಿ ಕಾಂಗ್ರೆಸ್‌ನೊಂದಿಗೆ ಯಾವುದೇ ಔಪಚಾರಿಕ ಮೈತ್ರಿ ಮಾಡಿಕೊಂಡಿರಲಿಲ್ಲ. ಆದರೂ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಸ್ಪರ್ಧಿಸಿದ್ದ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT