ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಿಳುನಾಡಿನ ಚೆನ್ನೈನಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರ ಶನಿವಾರ ರೋಡ್ ಶೋ ನಡೆಸಿದರು.

ಅಮಿತ್ ಶಾ ಅವರು ಖುಷ್ಬೂ ಮತ್ತು ಎಐಎಡಿಎಂಕೆ ಅಭ್ಯರ್ಥಿಗಳೊಂದಿಗೆ ತೆರೆದ ವ್ಯಾನಿನಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಹಲವಾರು ಜನರು ಸೇರಿದ್ದರು.

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ಕೊನೆಯ ದಿನ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ರೋಡ್ ಶೋ ನಡೆಸಿದ್ದರು. ಈ ವೇಳೆ ನೆರೆದಿದ್ದ ಕಾರ್ಯಕರ್ತರು ಮತ್ತು ಜನರು ಬಿಜೆಪಿ–ಎಐಎಡಿಎಂಕೆಯ ಪತಾಕೆಗಳನ್ನು ಹಾರಿಸಿದರು. ಅಲ್ಲದೆ ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಕೂಗಿದರು.

ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.