ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 12,110 ಕೋಟಿ ಕೃಷಿ ಸಾಲ ಮನ್ನಾ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಣೆ

Last Updated 5 ಫೆಬ್ರವರಿ 2021, 8:55 IST
ಅಕ್ಷರ ಗಾತ್ರ

ಚೆನ್ನೈ: ₹ 12,100 ಕೋಟಿ ಮೊತ್ತದ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ತಮಿಳುನಾಡು ಸರ್ಕಾರ ಶುಕ್ರವಾರ ಘೋಷಿಸಿದೆ.

ರಾಜ್ಯದ 16.43 ಲಕ್ಷ ರೈತರಿಗೆ ಈ ಸಾಲ ಮನ್ನಾ ಯೋಜನೆಯಿಂದ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ವಿಧಾನಸಭೆಯಲ್ಲಿ ಹೇಳಿದರು.

‘ಈ ಯೋಜನೆ ತಕ್ಷಣವೇ ಜಾರಿಗೆ ಬರಲಿದ್ದು, ಅಗತ್ಯವಿರುವ ಅನುದಾನವನ್ನು ಶೀಘ್ರವೇ ಒದಗಿಸಲಾಗುವುದು’ ಎಂದೂ ಅವರು ಹೇಳಿದರು.

‘ನೀಡಿರುವ ಭರವಸೆಗಳನ್ನು ಈಡೇರಿಸುವ ಜೊತೆಗೆ, ಹೊಸದಾಗಿ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಏಕೈಕ ಪಕ್ಷವೆಂದರೆ ಎಐಎಡಿಎಂಕೆ ಮಾತ್ರ’ ಎಂದರು.

‘ಅರ್ಹ ರೈತರಿಗೆ ತಲಾ ಎರಡು ಎಕರೆ ಜಮೀನು ನೀಡುವುದಾಗಿ ಡಿಎಂಕೆ ಘೋಷಿಸಿತ್ತು. ಆದರೆ, ಅದು ತನ್ನ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ’ ಎಂದು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT