ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನ ಕಾಂಗ್ರೆಸ್‌ ಶಾಸಕಿ ಎಸ್‌. ವಿಜಯಧರಣಿ ಬಿಜೆಪಿಗೆ ಸೇರ್ಪಡೆ

Published 24 ಫೆಬ್ರುವರಿ 2024, 9:54 IST
Last Updated 24 ಫೆಬ್ರುವರಿ 2024, 9:54 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಕಾಂಗ್ರೆಸ್‌ ಶಾಸಕಿ ಎಸ್‌. ವಿಜಯಧರಣಿ ಅವರು ಇಂದು (ಶನಿವಾರ) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ರಾಜ್ಯ ಖಾತೆ ಸಚಿವ ಎಲ್‌. ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಸೇರಿದಂತೆ ಇತರೆ ನಾಯಕರ ಸಮ್ಮುಖದಲ್ಲಿ ವಿಜಯಧರಣಿ ಅವರು ಬಿಜೆಪಿಗೆ ಸೇರಿದ್ದಾರೆ.

ವಿಲವಂಕೋಡ್ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಜಯಧರಣಿ ಅವರು ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಕಾಂಗ್ರೆಸ್‌ಗೆ ತುಸು ಹಿನ್ನೆಡೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT