ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಮಿಳುನಾಡು: ವಿಷಯುಕ್ತ ಮದ್ಯ ಕುಡಿದು ಮೃತಪಟ್ಟವರ ಸಂಖ್ಯೆ 63ಕ್ಕೆ ಏರಿಕೆ

Published 26 ಜೂನ್ 2024, 12:31 IST
Last Updated 26 ಜೂನ್ 2024, 12:31 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿಯಲ್ಲಿ ನಡೆದ ವಿಷಯುಕ್ತ ಮದ್ಯ ಸೇವನೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 63ಕ್ಕೆ ಏರಿದ್ದು, ಹಲವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ.

ದುರಂತದಲ್ಲಿ ಮೂವರು ಮಹಿಳೆಯರು, ಒಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 63 ಜನ ಸತ್ತಿದ್ದಾರೆ ಎಂದು ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್ ದೃಢಪಡಿಸಿದ್ದಾರೆ. ಒಟ್ಟು 219 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ.

‘ಬಾಧಿತರ ಪೈಕಿ ಹಲವರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ವಿಷಯುಕ್ತ ಮದ್ಯ ಮಾರಾಟ ತಡೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಪ್ರಶಾಂತ್ ತಿಳಿಸಿದ್ದಾರೆ.

‘ಅಗತ್ಯ ಪ್ರಮಾಣದ ಔಷಧ ದಾಸ್ತಾನು ಇದೆ. ವಿಷಯುಕ್ತ ಮದ್ಯ ಸೇವಿಸಿದವರು ಸ್ವಯಂಪ್ರೇರಣೆಯಿಂದ ಚಿಕಿತ್ಸೆ ಪಡೆದು ಸಂಭವನೀಯ ಅಪಾಯದಿಂದ ಪಾರಾಗಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಕಲ್ಲಕುರಿಚ್ಚಿಯಲ್ಲಿ ನಡೆದ ಅವಘಡ ಕುರಿತು ಸಿಬಿಐ ತನಿಖೆಗೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT