ಕೆ.ಆರ್.ನಗರ: ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರದ ಆಡಳಿತ ವಿರೋಧಿ ಅಲೆಯಿಂದ ಟಿವಿಕೆ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ಅವರ ಜನ್ಮದಿನಬದ ಅಂಗವಾಗಿ ವಿಶ್ವನಾಥ್ ಅಭಿಮಾನಿ ಬಳಗ ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ತಮಿಳುನಾಡಿನ ಮುಖ್ಯಮಂತ್ರಿ ಆಗಿದ್ದ ಎಂ.ಕೆ.ಸ್ಟಾಲಿನ್ ಸಾಕಷ್ಟು ಭ್ರಷ್ಟಾಚಾರದಲ್ಲಿ ತೊಡಗಿದ್ದರು. ಡಿಎಂಕೆ ಸರ್ಕಾರದ ನಡೆಯಿಂದ ಜನ ರೋಸಿ ಹೋಗಿದ್ದರು. ಹಾಗಾಗಿ ಜನರು ಟಿವಿಕೆ ಪಕ್ಷ ವನ್ನು ಬೆಂಬಲಿಸಿ, ನೂತನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಹೊಸ ಸರ್ಕಾರ ರಚಿಸಲು ಕಾರಣರಾಗಿದ್ದಾರೆ ಎಂದರು. ಅಲ್ಲಿನ ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದರು. ಏನಾದರೂ ಮಾಡಿ ಟಿವಿಕೆ ಪಕ್ಷ ಅಧಿಕಾರಕ್ಕೆ ಬರದಂತೆ ತಡೆಯಲು ಯತ್ನಿಸಿದರು. ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಳಿಸುತ್ತಾರೆ ಎಂಬುದು ಅಲ್ಲಿನ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ’ ಎಂದರು.

ಮೂಳೆ ತಜ್ಞ ಡಾ.ಮೆಹಬೂಬ್ ಖಾನ್, ಪುರಸಭೆ ಮಾಜಿ ಅಧ್ಯಕ್ಷ ತಮ್ಮನಾಯಕ, ಮಾಜಿ ಸದಸ್ಯ ಕೆ.ಪಿ.ಪ್ರಭುಶಂಕರ್ ಮಾತನಾಡಿದರು. ನಿವೃತ್ ಅಧಿಕಾರಿ ಎಸ್.ಟಿ.ಜವರೇಗೌಡ, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಮುಖಂಡರಾದ ಸುಬ್ಬುಕೃಷ್ಣ, ಅಮಿತ್ ವಿ.ದೇವರಹಟ್ಟಿ, ಸಯ್ಯದ್ ಅಸ್ಲಂ, ನಾಗರಾಜ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-38-1147003320

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.