ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸೇವಲ್‌ಪಟ್ಟಿ ಗ್ರಾಮದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಕಾರ್ಮಿಕ ಮೃತಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು 27 ವರ್ಷದ ಗೋವಿಂದರಾಜ್ ಎಂದು ಗುರುತಿಸಲಾಗಿದೆ.
ಈ ಅವಘಢದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.