ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು | ಬಸ್ – ಲಾರಿ ಡಿಕ್ಕಿ; 4 ಸಾವು, 15 ಮಂದಿ‌‌ಗೆ ಗಾಯ

Published 16 ಮೇ 2024, 2:22 IST
Last Updated 16 ಮೇ 2024, 2:22 IST
ಅಕ್ಷರ ಗಾತ್ರ

ಚೆನ್ನೈ: ಖಾಸಗಿ ಬಸ್‌ ಹಾಗೂ ಲಾರಿ ನಡುವೆ ಸಂಭವಿಸಿದ ಅ‍ಪಘಾತದಲ್ಲಿ 4 ಮಂದಿ ಮೃತಪಟ್ಟು, 15ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ತಮಿಳುನಾಡಿದ ಚೆಂಗಲ್‌ಪಟ್ಟು ಜಿಲ್ಲೆಯ ಮಧುರಂತಕಂ ಎಂಬಲ್ಲಿ ನಡೆದಿದೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ವರದಿ ಮಾಡಿದೆ.

ಚೆನ್ನೈ–ತ್ರಿಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಲಾರಿಯನ್ನು ಓವರ್‌ಟೇಕ್ ಮಾಡುವ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿಯ ಹಿಂಬಾಗಕ್ಕೆ ಬಸ್‌ ಡಿಕ್ಕಿ ಹೊಡೆದಿದ್ದು, ಅದರ ಹಿಂಬಾಗಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿರುವ ದೃಶ್ಯಗಳು ವಿಡಿಯೊದಲ್ಲಿ ದಾಖಲಾಗಿದೆ.

ಗಾಯಾಳುಗಳನ್ನು ಚೆಂಗಲ್‌ಪಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಪಡಲಂ ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT