ಚೆನ್ನೈ: ಜುಲೈ 1ರಿಂದ ತಮಿಳುನಾಡಿನ ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆಯನ್ನು ಶೇ 3ರಷ್ಟು ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಘೋಷಿಸಿದ್ದಾರೆ.
.ಮಹಿಳಾ ಮೀಸಲಾತಿ ಮಸೂದೆ ಮಂಡನೆ ‘ಚುನಾವಣಾ ಗಿಮಿಕ್’: ಎಂ.ಕೆ ಸ್ಟಾಲಿನ್.
ತುಟ್ಟಿಭತ್ಯೆ ಶೇ 55ರಿಂದ ಶೇ 58ಕ್ಕೆ ಏರಿಕೆ ಮಾಡುವ ನಿರ್ಧಾರ ಕೈಗೊಂಡ ಬಳಿಕ ರಾಜ್ಯ ಸರ್ಕಾರ ವಾರ್ಷಿಕ ₹1,829 ಕೋಟಿಗಳ ಹೆಚ್ಚುವರಿ ವೆಚ್ಚವನ್ನು ಭರಿಸಲಿದೆ. ರಾಜ್ಯದ ಸುಮಾರು 16 ಲಕ್ಷ ಸರ್ಕಾರಿ ನೌಕರರು, ಶಿಕ್ಷಕರು, ಪಿಂಚಣಿದಾರರು ಈ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಲಾಗಿದೆ.

‘ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರಿ ಸಿಬ್ಬಂದಿ ಮತ್ತು ಶಿಕ್ಷಕರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಆರ್ಥಿಕ ಬಿಕ್ಕಟ್ಟುಗಳ ಹೊರತಾಗಿಯೂ ಸರ್ಕಾರ ಅವರ ಕಲ್ಯಾಣಕ್ಕೆ ಬದ್ಧವಾಗಿದೆ’ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.