ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ, ಇಂದು (ಮಂಗಳವಾರ) ರಾಜ್ಯ ಸರ್ಕಾರದ ಭಾಷಣವನ್ನು ಓದದೇ ವಿಧಾನಸಭೆಯಿಂದ ಹೊರನಡೆದಿದ್ದಾರೆ.

ಇದರೊಂದಿಗೆ ಸತತ ಮೂರನೇ ವರ್ಷವೂ ಸರ್ಕಾರ ಸಿದ್ಧಪಡಿಸಿಕೊಟ್ಟ ಭಾಷಣವನ್ನು ಓದಲು ನಿರಾಕರಿಸಿದ್ದಾರೆ.

'ನನಗೆ ನಿರಾಸೆಯಾಗಿದೆ. ರಾಷ್ಟ್ರಗೀತೆಗೆ ಸರಿಯಾದ ಗೌರವ ಸಿಗಲಿಲ್ಲ' ಎಂದು ಆರ್.ಎನ್.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದನಕ್ಕೆ ಆಗಮಿಸಿದ ರವಿ ಅವರನ್ನು ಸ್ಪೀಕರ್ ಎಂ. ಅಪ್ಪಾವು ಅವರು ಸ್ವಾಗತಿಸಿದರು. ಆದರೆ ತಮಿಳುನಾಡು ವಿಧಾನಸಭೆಯನ್ನು ಉದ್ದೇಶಿಸಿ ಭಾಷಣ ಮಾಡದೇ ಹೊರಟು ಹೋದರು.
.ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ.ವರ್ತನೆ ಬದಲಿಸಿಕೊಳ್ಳದ ರಾಜ್ಯಪಾಲ: ಸ್ಟಾಲಿನ್ ಆರೋಪ.
ಸದನಕ್ಕೆ ಅವಮಾನ: ಸ್ಟಾಲಿನ್

'ಅಧಿವೇಶನದಿಂದ ರಾಜ್ಯಪಾಲ ಆರ್.ಎನ್.ರವಿ ಅವರ ಹೊರನಡೆದಿರುವ ನಡೆಯನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಟೀಕಿಸಿದ್ದಾರೆ. ಸಾಂಪ್ರದಾಯವನ್ನು ಉಲ್ಲಂಘಿಸಿ ರಾಜ್ಯಪಾಲರು ಹೊರನಡೆದಿದ್ದಾರೆ. ರಾಜ್ಯಪಾಲರು ಉದ್ದೇಶಪೂರ್ವಕವಾಗಿಯೇ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ನಡೆಯು ಇಡೀ ಸದನವನ್ನು ಅವಮಾನಿಸಿದಂತೆ' ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

'ರಾಜ್ಯಪಾಲರಿಗೆ ಭಾಷಣದಲ್ಲಿ ತಮ್ಮ ಅಭಿಪ್ರಾಯಗಳನ್ನು ಸೇರಿಸಲು ಯಾವುದೇ ಅವಕಾಶ ಇರುವುದಿಲ್ಲ' ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.