ಚೆನ್ನೈ: ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಇಬ್ಬರು ಕಾರ್ಯದರ್ಶಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಿವಿಕೆ ಪಕ್ಷದ ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ.ಮತಿಯಾಳಗನ್ ಮತ್ತು ಕರೂರು ಕೇಂದ್ರ ಜಿಲ್ಲಾ ಕಾರ್ಯದರ್ಶಿ ಕಾಸಿ ಪೌನ್ರಾಜ್ ಅವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ್ ಮತ್ತು ಉಪ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ಅವರ ವಿರುದ್ಧವು ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಅವರನ್ನು ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105, 110, 125 ಮತ್ತು 223ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
.ಕರೂರು ಕಾಲ್ತುಳಿತ: ಮೊದಲ ಬಾರಿಗೆ ಕ್ಯಾಮೆರಾ ಎದುರು ಬಂದು ವಿಜಯ್ ಪ್ರತಿಕ್ರಿಯೆ.ಕರೂರು ಕಾಲ್ತುಳಿತ: ಟಿವಿಕೆ ಜಿಲ್ಲಾ ಕಾರ್ಯದರ್ಶಿ ಬಂಧನ.ಕರೂರು ಕಾಲ್ತುಳಿತ: ವಿಜಯ್ ನೋಡುವ ಆಸೆಯಿಂದ ಹೋದ ಒಂದೇ ಗ್ರಾಮದ ನಾಲ್ವರು ಸಾವು.ಕರೂರು ಕಾಲ್ತುಳಿತ ದುರಂತ: ಹೇಮಾ ಮಾಲಿನಿ ನೇತೃತ್ವದ NDA ಸಂಸದರ ನಿಯೋಗ ಭೇಟಿ.ಕರೂರು ಕಾಲ್ತುಳಿತ ದುರಂತದ ಬಗ್ಗೆ ವದಂತಿ ಹರಡಬೇಡಿ: ತಮಿಳುನಾಡು ಸಿಎಂ ಸ್ಟಾಲಿನ್.Photos | ಕಾಲ್ತುಳಿತ: ಹೃದಯ ವಿದ್ರಾವಕ ದೃಶ್ಯಗಳಿಗೆ ಸಾಕ್ಷಿಯಾದ ಕರೂರು ಆಸ್ಪತ್ರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.