ನವದೆಹಲಿ (ಪಿಟಿಐ): ತಮಿಳುನಾಡಿನ ನೂತನ ಸಚಿವರಲ್ಲಿ ಅರ್ಧದಷ್ಟು ಜನರ ವಿರುದ್ಧ ಅಪರಾಧ ಪ್ರಕರಣಗಳಿವೆ. ಶೇಕಡ 20ರಷ್ಟು ಸಚಿವರು ₹100 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ ಎಂದು ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್) ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

‘10 ಶಾಸಕರಲ್ಲಿ ತಲಾ ಐದು ಶಾಸಕರು ತಮ್ಮ ವಿರುದ್ಧ ಅಪರಾಧ ಪ್ರಕರಣವಿರುವುದಾಗಿ ಘೋಷಿಸಿದ್ದಾರೆ, ಅದರಲ್ಲಿ ತಲಾ ಮೂವರ ವಿರುದ್ದ ಗಂಭೀರ ಅಪರಾಧ ಪ್ರಕರಣಗಳಿವೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಚಿವ ಸಂಪುಟದಲ್ಲಿರುವವರಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಹೆಚ್ಚು ಶ್ರೀಮಂತರಾಗಿದ್ದು, ಅವರ ಆಸ್ತಿಯ ಒಟ್ಟು ಮೌಲ್ಯ ₹648.85 ಕೋಟಿ ಇದೆ. ಸಚಿವ ಸಂಪುಟದಲ್ಲಿರುವವರ ಸರಾಸರಿ ಆಸ್ತಿ ₹126.50 ಕೋಟಿ ಇದೆ.

₹22.57 ಲಕ್ಷ ಮೊತ್ತದ ಆಸ್ತಿ ಹೊಂದಿರುವ ಸಚಿವೆ ಕೀರ್ತನಾ ಸಂಪತ್ ಅವರು ತಮಿಳುನಾಡಿನ ಸಚಿವರಲ್ಲಿ ಅತಿ ಕಡಿಮೆ ಆಸ್ತಿ ಹೊಂದಿರುವವರು. ಸಚಿವ ಸಂಪುಟದಲ್ಲಿ ಒಬ್ಬರು ಮಹಿಳೆ ಮಾತ್ರ ಇದ್ದಾರೆ.

ಮೂವರು ಸಚಿವರು ತಮ್ಮ ವಿದ್ಯಾರ್ಹತೆ 8ನೇ ತರಗತಿಯಿಂದ 12ನೇ ತರಗತಿವರೆಗೆ ಎಂದು ಘೋಷಿಸಿಕೊಂಡಿದ್ದಾರೆ. ಏಳು ಮಂದಿ ಪದವಿ ಮತ್ತು ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-490144995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.