ಚೆನ್ನೈ: ತಮಿಳುನಾಡಿನ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆಯ ಬಹುಪಾಲು ನೂತನ ಶಾಸಕರು ಮುಂದಿನ ಸರ್ಕಾರ ರಚಿಸಲು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಬೆಂಬಲ ನೀಡುವಂತೆ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷವು ಡಿಎಂಕೆ ಮೈತ್ರಿಕೂಟದಿಂದ ಹೊರಬಂದು ಟಿವಿಕೆಗೆ ಬೆಂಬಲ ನೀಡಲು ಸಜ್ಜಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮೈಲಂ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಹಿರಿಯ ನಾಯಕ ಸಿ.ವಿ. ಷಣ್ಮುಗಂ ಅವರು ಈ ಪ್ರಸ್ತಾಪವನ್ನು ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ. ಬಹುಪಾಲು ನೂತನ ಶಾಸಕರು ಷಣ್ಮುಗಂ ಅವರ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದ್ದು, ಇದರ ಬಗ್ಗೆ ಗಂಭೀರ ಚಿಂತನೆ ನಡೆಸುವಂತೆ ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಿಗೆ ವಿನಂತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಇದು ಕೇವಲ ಟಿವಿಕೆಗೆ ಸಿಕ್ಕಿರುವ ಜನಾದೇಶವನ್ನು ಗೌರವಿಸುವ ವಿಷಯವಷ್ಟೇ ಅಲ್ಲ. ಬದಲಾಗಿ, ಎಐಎಡಿಎಂಕೆ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳುವ ಪ್ರಶ್ನೆಯೂ ಹೌದು. ಡಿಎಂಕೆ ಪ್ರಮುಖ ವಿರೋಧ ಪಕ್ಷದ ಸ್ಥಾನವನ್ನು ವಹಿಸಿಕೊಳ್ಳುತ್ತಿರುವುದರಿಂದ ನಾವು ಸ್ಪಷ್ಟ ನಿಲುವು ತೆಗೆದುಕೊಳ್ಳುವ ಅಗತ್ಯವಿದೆ’ ಎಂದು ಹಿರಿಯ ನಾಯಕರೊಬ್ಬರು 'ಡೆಕ್ಕನ್ ಹೆರಾಲ್ಡ್'ಗೆ ತಿಳಿಸಿದ್ದಾರೆ.

ಪಳನಿಸ್ವಾಮಿ ಅವರು ಶಾಸಕರ ಈ ವಿನಂತಿಯನ್ನು ಸಕಾರಾತ್ಮಕವಾಗಿ ಪರಿಗಣಿಸಲಿದ್ದು, ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮೈತ್ರಿಕೂಟದಿಂದ ಹೊರಬಂದು ಟಿವಿಕೆ ಜೊತೆ ಸ್ನೇಹ ಬೆಳೆಸಲು ಎಐಎಡಿಎಂಕೆಗೆ ಇದು ಸರಿಯಾದ ಸಮಯ ಎಂಬುದು ಪಕ್ಷದ ನಾಯಕರು ಅಭಿಪ್ರಾಯ. ಒಮ್ಮೆ ಈ ನಿರ್ಧಾರದ ಬಗ್ಗೆ ಸ್ಪಷ್ಟತೆ ಸಿಕ್ಕ ನಂತರ ಟಿವಿಕೆಗೆ ನೀಡಬೇಕಾದ ಬೆಂಬಲದ ಸ್ವರೂಪದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.

ಎಐಎಡಿಎಂಕೆ ಪಕ್ಷವು ಟಿವಿಕೆಗೆ ಪರೋಕ್ಷ ಬೆಂಬಲ ನೀಡುತ್ತದೆಯೇ ಅಥವಾ ಸರ್ಕಾರದ ಭಾಗವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾವುದನ್ನೂ ತಳ್ಳಿಹಾಕುವಂತಿಲ್ಲ’ ಎಂದಿದ್ದಾರೆ.
.Tamil Nadu Politics: ಡಿಎಂಕೆ ಜೊತೆ ಮೈತ್ರಿ ಮುರಿದುಕೊಳ್ಳುವುದೇ ಕಾಂಗ್ರೆಸ್?.ಮತ ಕಳ್ಳತನದಿಂದ ಗೆದ್ದಿರುವ ಬಿಜೆಪಿ ಸಂಸದರು ನುಸುಳುಕೋರರೇ: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.