ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು | ತಿರುನಲ್ವೇಲಿಯಲ್ಲಿ ಮುಂದುವರಿದ ಮಳೆ: 696 ಗರ್ಭಿಣಿಯರ ಸ್ಥಳಾಂತರ

Published 22 ಡಿಸೆಂಬರ್ 2023, 5:49 IST
Last Updated 22 ಡಿಸೆಂಬರ್ 2023, 5:49 IST
ಅಕ್ಷರ ಗಾತ್ರ

ತಿರುನೆಲ್ವೇಲಿ: ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದೆ. ಮಳೆಯಿಂದಾಗಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು 696 ಗರ್ಭಿಣಿಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದ 142 ಗರ್ಭಿಣಿಯರು, ಶಿಶುಗಳಿಗೆ ಜನ್ಮ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ತಮಿಳುನಾಡಿನಲ್ಲಿ ಭಾರಿ ಹಾನಿಯುಂಟಾಗಿದ್ದು, ಭಾರತೀಯ ನೌಕಾಪಡೆಯು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದೆ.

ಮಳೆ ಪರಿಸ್ಥಿತಿ ಕುರಿತು ಮಾತನಾಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌, ‘ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಜನರ ನೆರವಿಗಾಗಿ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಚೆನ್ನೈ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ನಾವು ತೂತುಕುಡಿ ಜಿಲ್ಲೆಯಲ್ಲಿ ಈ ಪ್ರಮಾಣದ ಮಳೆಯನ್ನು ಇತಿಹಾಸದಲ್ಲಿ ನೋಡಿಲ್ಲ. ರಕ್ಷಣಾ ಕಾರ್ಯಾಚರಣೆಗಾಗಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ನಿಯೋಜಿಸಲಾಗಿದೆ. ಈವರೆಗೆ ಸುಮಾರು 12,653 ಜನರನ್ನು ರಕ್ಷಿಸಲಾಗಿದ್ದು, 14 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT