ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮರುದಿನವೇ ಮಾಜಿ ಸಿಎಂ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿದ್ದಾರೆ.

ಚೆನ್ನೈನಲ್ಲಿರುವ ಸ್ಟಾಲಿನ್ ಅವರ ನಿವಾಸಕ್ಕೆ ವಿಜಯ್ ಭೇಟಿ ನೀಡಿದ್ದಾರೆ. ಉಭಯ ನಾಯಕರು ಕೆಲಕಾಲ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

‘ದಳಪತಿ’ ಎಂದೇ ಜನಪ್ರಿಯರಾಗಿರುವ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹಿರಿಯ ನಾಯಕ ಕೆ.ಎ. ಸೆಂಗೊಟೈಯನ್ ಮತ್ತು ಯುವ ಮುಖಗಳಾದ ಡಾ. ಟಿ.ಕೆ.ಪ್ರಭು ಹಾಗೂ ಎಸ್.ಕೀರ್ತನಾ ಅವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಆಧವ್ ಅರ್ಜುನ, ಎನ್. ಆನಂದ್, ಆರ್. ನಿರ್ಮಲ್ ಕುಮಾರ್, ಎ. ರಾಜ್ಮೋಹನ್, ಪಿ. ವೆಂಕಟರಮಣನ್ ಮತ್ತು ಕೆ.ಜಿ. ಅರುಣ್ರಾಜ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಮತ್ತು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಟಿವಿಕೆಗೆ ಸರ್ಕಾರ ರಚಿಸಲು ಬೆಂಬಲ ನೀಡಿರುವ ವಿಸಿಕೆ, ಸಿಪಿಐ, ಸಿಪಿಎಂ ಮತ್ತು ಐಯುಎಂಎಲ್ ಪಕ್ಷಗಳ ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.