ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ, ಡಿಎಂಡಿಕೆ ಮುಖಂಡ ವಿಜಯಕಾಂತ್‌ಗೆ ಕೋವಿಡ್ ದೃಢ: ಐಸಿಯುನಲ್ಲಿ ಚಿಕಿತ್ಸೆ

Published 28 ಡಿಸೆಂಬರ್ 2023, 3:01 IST
Last Updated 28 ಡಿಸೆಂಬರ್ 2023, 3:01 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಡಿಎಂಡಿಕೆ ನಾಯಕ ಹಾಗೂ ನಟ ವಿಜಯಕಾಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ.

ವಿಜಯಕಾಂತ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದ ವೈದ್ಯರು ಹೇಳಿದ್ದಾರೆ.

ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕಪಡುವ ಅಗತ್ಯ ಇಲ್ಲ ಎಂದು ಡಿಎಂಡಿಕೆ ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT