ಚೆನ್ನೈ: ಕೇಂದ್ರ ಸರ್ಕಾರದ ಆದೇಶದಂತೆ ತಮಿಳುನಾಡು ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು (ಪಿಎಫ್‌ಐ) ಗುರುವಾರ ನಿಷೇಧಿಸಿದೆ. ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಕಮಿಷನರ್‌ಗಳಿಗೆ ನಿಷೇಧವನ್ನು ಜಾರಿ ಮಾಡುವ ಜವಾಬ್ದಾರಿ ನೀಡಲಾಗಿದೆ.

ಕಾನೂನು ಬಾಹಿರ ಚಟುವಟಿಕೆಗ ತಡೆ ಕಾಯ್ದೆ ಅಡಿಯಲ್ಲಿ ಪಿಎಫ್‌ಐ ನಿಷೇಧಿಸಲು ಯಾವುದೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೊ ಅವೆಲ್ಲವನ್ನೂ ಮಾಡುವಂತೆ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪಿಎಫ್ಐ ನಿಷೇಧಿಸುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಬುಧವಾರ ನಿರ್ದೇಶನ ನೀಡಿತ್ತು.

ಟ್ವಿಟರ್ ಖಾತೆ ಸ್ಥಗಿತ: ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾದ ಅಧಿಕೃತ ಟ್ವಿಟರ್ ಖಾತೆ @PFIOfficial ಅನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ.

ಭಾರತ ಸರ್ಕಾರವು ಪಿಎಫ್‌ಐ ಅನ್ನು ನಿಷೇಧ ಮಾಡಿರುವ ಕಾರಣಕ್ಕಾಗಿ ಇದರ ಅಧಿಕೃತ ಟ್ವಿಟರ್ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಪಿಎಫ್‌ಐ ಅಧಿಕೃತ ಟ್ವಿಟರ್ ಖಾತೆಯ ಪೇಜ್‌ನಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.