ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಡಿಎಂಕೆ ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿದ ಸಿಎಂ ಸ್ಟಾಲಿನ್‌

Published 22 ಮಾರ್ಚ್ 2024, 4:28 IST
Last Updated 22 ಮಾರ್ಚ್ 2024, 4:28 IST
ಅಕ್ಷರ ಗಾತ್ರ

ತಿರುಚಿನಾಪಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಪಕ್ಷದ ಅಭ್ಯರ್ಥಿಗಳ ಪರ ಇಂದಿನಿಂದ ಪ್ರಚಾರ ಆರಂಭಿಸಿದ್ದಾರೆ. 

ಪ್ರಚಾರದ ಮೊದಲ ದಿನವಾದ ಇಂದು, ತಿರುಚಿನಾಪಳ್ಳಿ ಅಭ್ಯರ್ಥಿ ದುರೈ ವೈಕೊ ಮತ್ತು ಪೆರಂಬಲೂರಿನಲ್ಲಿ ಡಿಎಂಕೆಯ ಅರುಣ್ ನೆಹರು ಅವರ ಪರವಾಗಿ ಸ್ಟಾಲಿನ್ ಮತಯಾಚನೆ ಮಾಡಲಿದ್ದಾರೆ. 

ತಿರುಚನಾಪಳ್ಳಿಯಲ್ಲಿ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿ ಮುಂದಿನ ದಿನಗಳಲ್ಲಿ ಪುದುಚೇರಿ ಹೊರತುಪಡಿಸಿ ರಾಜ್ಯದ ಎಲ್ಲಾ 39 ಲೋಕಸಭಾ ಸ್ಥಾನಗಳನ್ನು ಒಳಗೊಂಡು ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಏಪ್ರಿಲ್ 17 ರಂದು ಚೆನ್ನೈನಲ್ಲಿ ಪ್ರಚಾರವನ್ನು ಮುಕ್ತಾಯಗೊಳಿಸಲಿದ್ದು,  ಅಂದು ದಕ್ಷಿಣ ಚೆನ್ನೈ ಮತ್ತು ಸೆಂಟ್ರಲ್ ಚೆನ್ನೈ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ತಮಿಳುನಾಡಿನಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್‌ 19 ಮತದಾನದ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT