ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿಯ 2ನೇ ಪಟ್ಟಿ ಬಿಡುಗಡೆ

Published 14 ಮಾರ್ಚ್ 2024, 9:19 IST
Last Updated 14 ಮಾರ್ಚ್ 2024, 9:19 IST
ಅಕ್ಷರ ಗಾತ್ರ

ಅಮರಾವತಿ (ಆಂಧ್ರಪ್ರದೇಶ): ಮುಂಬರುವ ವಿಧಾನಸಭೆ ಚುನಾವಣೆಗೆ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಗುರುವಾರ 34 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ್ದಾರೆ

ಇಲ್ಲಿಯವರೆಗೂ ಟಿಡಿಪಿ 2 ಪಟ್ಟಿಗಳಲ್ಲಿ 128 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ, ಇನ್ನೂ 16 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವುದು ಮಾತ್ರ ಬಾಕಿ ಇದೆ. 

ನಾವು ಸಾರ್ವಜನಿಕರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಅಯ್ಕೆ ಮಾಡಿದ್ದೇವೆ. ಇವರನ್ನು ಗೆಲ್ಲಿಸುವಂತೆ ಜನರಲ್ಲಿ ಚಂದ್ರಬಾಬು ನಾಯ್ಡು ಮನವಿ ಮಾಡಿದ್ದಾರೆ. 

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಸ್ಪರ್ಧೆ ಮಾಡುತ್ತಿದೆ. ಈ ಮೈತ್ರಿಯಲ್ಲಿ ನಟ ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಕೂಡ ಸೇರಿದೆ. 

ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಸೀಟು ಹೊಂದಾಣಿಕೆ ಮಾಡಿಕೊಂಡಿವೆ. ಈ ಪ್ರಕಾರ ಟಿಡಿಪಿ 17 ಲೋಕಸಭೆ ಮತ್ತು 144 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಬಿಜೆಪಿ 6 ಲೋಕಸಭೆ, 10 ವಿಧಾನಸಭೆ ಕ್ಷೇತ್ರಗಳಲ್ಲಿ, ಜನಸೇನಾ 2 ಲೋಕಸಭೆ, 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT