ನವದೆಹಲಿ: ಜಾತಿ ಗಣತಿಯ ಪ್ರತಿಯೊಂದು ಹಂತಕ್ಕೂ ಸ್ಪಷ್ಟ ಕಾಲಮಿತಿ ನಿಗದಿ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಪಕ್ಷ ಶುಕ್ರವಾರ ಆಗ್ರಹಿಸಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಮೀಸಲಾತಿಯ ಶೇ 50 ಮಿತಿಯನ್ನು ತೆಗೆದು ಹಾಕಬೇಕು ಎಂದು ಪಕ್ಷ ಪುನರುಚ್ಚರಿಸಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.

ಪಹಲ್ಗಾಮ್ನಲ್ಲಿ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿಗ್ರಹಿಸಲು ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು ಎಂದು ಪಕ್ಷವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ‘ಇಡೀ ದೇಶವು ಉತ್ತರ ಹಾಗೂ ನ್ಯಾಯಕ್ಕಾಗಿ ಕಾಯುತ್ತಿದೆ. ಇಂತಹ ಪ್ರಚೋದನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಇದು ರಾಜಕೀಯಕ್ಕೆ ಸಮಯವಲ್ಲ. ಒಗ್ಗಟ್ಟು, ಶಕ್ತಿ ಪ್ರದರ್ಶನ ಹಾಗೂ ರಾಷ್ಟ್ರೀಯ ಸಂಕಲ್ಪಕ್ಕೆ ಕರೆ ನೀಡುವ ಕ್ಷಣ’ ಎಂದು ಅಭಿಪ್ರಾಯಪಟ್ಟಿದೆ. ‘ದೇಶದ ಅತ್ಯಂತ ಬಿಗಿ ಭದ್ರತೆಯ ಜಾಗದಲ್ಲಿ ಈ ಘೋರ ದುರಂತ ನಡೆದಿದೆ. ಭದ್ರತೆ ಹಾಗೂ ಗುಪ್ತಚರ ಇಲಾಖೆಯಲ್ಲಿನ ಗಂಭೀರ ಲೋಪಗಳಿಗೆ ಶೀಘ್ರ ಹೊಣೆಗಾರಿಕೆ ನಿಗದಿಪಡಿಸಬೇಕು’ ಎಂದು ಪಕ್ಷ ಆಗ್ರಹಿಸಿದೆ.

‘ಜಾತಿ ಗಣತಿಯ ಪ್ರಸ್ತಾವಕ್ಕೆ ಬಿಜೆಪಿ 11 ವರ್ಷಗಳ ಕಾಲ ವಿರೋಧ ವ್ಯಕ್ತಪಡಿಸಿತು ಹಾಗೂ ಹಠಮಾರಿತನ ಧೋರಣೆ ತಳೆಯಿತು. ಈ ಬೇಡಿಕೆಯನ್ನು ಮುಂದಿಟ್ಟಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕತ್ವದ ವಿರುದ್ಧ ನಿರಂತರ ದಾಳಿ ನಡೆಸಿದರು. ಕೊನೆಗೂ ಪಕ್ಷದ ಹೋರಾಟಕ್ಕೆ ಸರ್ಕಾರ ಮಣಿದಿದೆ. ಆದರೆ, ಯಾವ ರೀತಿಯಲ್ಲಿ ಜಾತಿ ಗಣತಿ ನಡೆಸಲಾಗುತ್ತದೆ ಎಂಬ ಬಗ್ಗೆ ಸರ್ಕಾರ ವಿವರ ನೀಡಿಲ್ಲ ಹಾಗೂ ಅದಕ್ಕೆ ಅಗತ್ಯ ಅನುದಾನವನ್ನೂ ಒದಗಿಸಿಲ್ಲ’ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ತೆಲಂಗಾಣದ ಮಾದರಿಯಲ್ಲೇ ದೇಶದಾದ್ಯಂತ ಜಾತಿ ಗಣತಿ ಮಾಡಬೇಕು ಎಂದೂ ಪಕ್ಷ ಆಗ್ರಹಿಸಿದೆ.

‘ಈ ವಿಷಯದ ಬಗ್ಗೆ ಸಂಸತ್ನಲ್ಲಿ ತಕ್ಷಣವೇ ಚರ್ಚೆ ನಡೆಸಬೇಕು. ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಗಣತಿಗೆ ತಕ್ಷಣವೇ ಅಗತ್ಯ ಅನುದಾನ ಹಂಚಿಕೆ ಮಾಡಬೇಕು. ಪ್ರಶ್ನಾವಳಿ, ಎಣಿಕೆ, ವರ್ಗೀಕರಣ, ದತ್ತಾಂಶ ಸಂಗ್ರಹ ಸೇರಿದಂತೆ ಪ್ರತಿಯೊಂದು ಹಂತಕ್ಕೂ ಸ್ಪಷ್ಟ ಕಾಲಮಿತಿ ನಿಗದಿ ಮಾಡಬೇಕು. ಈ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು’ ಎಂದು ಸಲಹೆ ನೀಡಿದೆ.

‘ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿಗಳು, ದಲಿತರು ಮತ್ತು ಆದಿವಾಸಿಗಳಿಗೆ ಮೀಸಲಾತಿ ಒದಗಿಸಲು ಅನುವು ಮಾಡಿಕೊಡುವ ಸಂವಿಧಾನದ 15(5) ನೇ ವಿಧಿಯನ್ನು ತುರ್ತಾಗಿ ಜಾರಿಗೆ ತರಬೇಕೆಂದು ಪಕ್ಷ ಒತ್ತಾಯಿಸಿದೆ.

‘ಉಗ್ರ ದಾಳಿ: ಸರ್ಕಾರದಿಂದ ಕಾರ್ಯತಂತ್ರ ಇಲ್ಲ’

‘ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟ ಕಾರ್ಯತಂತ್ರ ರೂಪಿಸಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಆದರೆ, ಈ ವಿಷಯದಲ್ಲಿ ಇಡೀ ವಿರೋಧ ಪಕ್ಷವು ಕೇಂದ್ರ ಸರ್ಕಾರದೊಂದಿಗೆ ಇದೆ ಎಂದು ಅವರು ಸ್ಪಷ್ಟಪಡಿಸಿದರು.

ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ದೇಶದಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕೆಂಬ ಪಕ್ಷದ ಬೇಡಿಕೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಇದು ರಾಹುಲ್ ಗಾಂಧಿ ಹೋರಾಟಕ್ಕೆ ಸಿಕ್ಕ ಜಯ. ನಾವು ಜನರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಎತ್ತಿದರೆ, ಸರ್ಕಾರ ತಲೆಬಾಗಬೇಕು ಎಂಬುದನ್ನು ರಾಹುಲ್ ಅವರು ಮತ್ತೊಮ್ಮೆ
ಸಾಬೀತುಪಡಿಸಿದ್ದಾರೆ’ ಎಂದು ಶ್ಲಾಘಿಸಿದರು.

‘ಜಾತಿ ಗಣತಿ ನಡೆಸಬೇಕು ಎಂದು ಒತ್ತಾಯಿಸಿ 2023ರ ಏಪ್ರಿಲ್ ತಿಂಗಳಿನಲ್ಲಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದೆ. ಆಗ ಸರ್ಕಾರ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಏಕಾಏಕಿ ಮನಸ್ಸು ಬದಲಾಯಿಸಿದ್ದು ಏಕೆ ? ಸರ್ಕಾರದ ನಡೆ ಅನುಮಾನದಿಂದ ಕೂಡಿದೆ’ ಎಂದು ಅವರು ಹೇಳಿದರು.

‘ಸರ್ಕಾರ ಈ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟದ ಉನ್ನತ ನಾಯಕರು ಪ್ರತಿ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸುವ ಮೂಲಕ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರಿಗೆ ಶ್ರೇಯಸ್ಸು ನೀಡಲು ಯತ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷವೇ ಜಾತಿ ಜನಗಣತಿ ವಿರೋಧಿಸುತ್ತಿದೆ ಎಂದು ಬಿಂಬಿಸುತ್ತಿದ್ದಾರೆ. ಈ ಕುತಂತ್ರದ ವಿರುದ್ಧ ನಾವು ಕಾರ್ಯತಂತ್ರ ರೂಪಿಸಬೇಕು. ಮಿತ್ರಪಕ್ಷಗಳ ಜತೆಗೂಡಿ ರಾಷ್ಟ್ರಮಟ್ಟ ಅಥವಾ ರಾಜ್ಯ ಮಟ್ಟದಲ್ಲಿ ಸಾರ್ವಜನಿಕ ಸಭೆ ನಡೆಸಬೇಕು ಅಥವಾ ದೇಶದಾದ್ಯಂತ ಪತ್ರಿಕಾಗೋಷ್ಠಿಗಳನ್ನು ನಡೆಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.